Monday, March 15, 2010

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ !

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆUgadi
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ
ಹೊಂಗೆ ಹೂವ ತೊಂಗಳಲ್ಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಬರುತಿದೆ 
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾಲಕೆ
ಒಂದೆ ಒಂದು ಜನ್ಮದಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೆ ಏತಕೋ
ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ
ಎಲೇ ಸನತ್ಕುಮಾರದೇವ ಎಲೇ ಸಾಹಸಿ ಚಿರಂಜೀವ ನಿನಗೆ ಲೀಲೆ ಸೇರದೋ
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ನಮ್ಮನಷ್ಟೆ ಮರೆತಿದೆ

ನನ್ನ ಹೊಸ ವೆಬ್ ಸೈಟ್ ಅನ್ನು ನೋಡಿ : http://www.vivekrp.com Or http://vivekrp.in

Posted via email from Vινєк Rp's Blog

No comments:

Post a Comment